ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕು ಮಹಾರಾಜಪೇಟೆ ಬಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ www.navodaya.gov.in ಮೂಲಕ ಸೆಪ್ಟೆಂಬರ್ 16ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರವೇಶ ಪರೀಕ್ಷೆ 2025ರ ಜನವರಿ 18ರಂದು ನಡೆಯಲಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
Tags:
Education